ಬೆಂಗಳೂರು: ಮಿದುಳಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.
ಸಕಲೇಶಪುರ ತಾಲ್ಲೂಕಿನ ಹೊಸಹಳ್ಳಿ ಗ್ರಾಮದ ರೈತ ದಂಪತಿಯ ಪುತ್ರ ವಿಕಾಸ್‌ಗೆ (30)ಮಿದುಳಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಗರದ ಸ್ಪರ್ಶ್ ಆಸ್ಪತ್ರೆಗೆ ಸ್ಥಳಾಂತರಿಸಿ, ಕೆಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕೋಮಾದಿಂದ ಹೊರಬಾರದ ಹಿನ್ನೆಲೆಯಲ್ಲಿ ವೈದ್ಯರು, ಮಿದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದರು.ಕುಟುಂಬದ ಸದಸ್ಯರಿಗೆ ಅಂಗಾಂಗ ದಾನದ ಮಹತ್ವ ತಿಳಿಸಿ, ಅನುಮತಿ ಪಡೆದರು.
ಯುವಕನ ಹೃದಯ, ಮೂತ್ರಪಿಂಡ,ಯಕೃತ್ತು ಹಾಗೂಶ್ವಾಸಕೋಶಗಳನ್ನು ದಾನ ಮಾಡಿದ್ದು, ಅಂಗಾಂಗಕ್ಕಾಗಿ ಎದುರು ನೋಡುತ್ತಿದ್ದ ಆರು ಮಂದಿಗೆ ಸಹಾಯವಾಗಲಿದೆ ಎಂದು ವೈದ್ಯರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.