ADVERTISEMENT

ಬೆಂಗಳೂರು: ಐಷಾರಾಮಿ ಜೀವನಕ್ಕೆ ಹಣ ಹೊಂದಿಸಲು ಕಳ್ಳತನ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 16:17 IST
Last Updated 25 ಜೂನ್ 2022, 16:17 IST
ಆರೋಪಿಗಳಿಂದ ಜಪ್ತಿ ಮಾಡಲಾದ ದ್ವಿಚಕ್ರ ವಾಹನಗಳು
ಆರೋಪಿಗಳಿಂದ ಜಪ್ತಿ ಮಾಡಲಾದ ದ್ವಿಚಕ್ರ ವಾಹನಗಳು   

ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುವ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಜಗಜೀವನ್‌ರಾಮ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ತೌಫಿಕ್ ಪಾಷಾ, ಅಮೀನ್ ಪಾಷಾ, ಸಲ್ಮಾನ್ ಹಾಗೂ ಆಫ್ರಿದ್ ಖಾನ್ ಬಂಧಿತರು. ಇವರಿಂದ ₹ 9.80 ಲಕ್ಷ ಮೌಲ್ಯದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ನೇಹಿತರಾದ ನಾಲ್ವರು, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದರು. ಕದ್ದ ವಾಹನಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಂಡು ಐಷಾರಾಮಿ ಜೀವನ ನಡೆಸುತ್ತಿದ್ದರು. ಮೋಜು– ಮಸ್ತಿಗೂ ಹಣ ಖರ್ಚು ಮಾಡುತ್ತಿದ್ದರು’ ಎಂದೂ ತಿಳಿಸಿದರು.

ADVERTISEMENT

‘ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ವಾಹನಗಳನ್ನು ಗುರುತಿಸಿ ಹ್ಯಾಂಡಲ್‌ ಲಾಕ್‌ ಮುರಿದು ಕಳ್ಳತನ ಮಾಡುತ್ತಿದ್ದರು. ವಿಜಯನಗರ, ಸಂಪಿಗೆಹಳ್ಳಿ, ಬಸವನಗುಡಿ, ಕೆಂಪೇಗೌಡ, ಚನ್ನಮ್ಮನಕೆರೆ ಅಚ್ಚುಕಟ್ಟು, ಸಿದ್ದಾಪುರ ಸೇರಿದಂತೆ ವಿವಿಧ ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.