ಬಂಧನ
ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಅಮೃತಹಳ್ಳಿ ಠಾಣೆ ಪೊಲೀಸರು, ಆತನಿಂದ ₹ 5 ಲಕ್ಷ ಮೌಲ್ಯದ 5 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಮೃತಹಳ್ಳಿಯ ಹಿಮಾಂಶು(30) ಬಂಧಿತ. ಏಪ್ರಿಲ್ 29ರಂದು ಸಂಜೆ ಅಮೃತಹಳ್ಳಿ ಸಮೀಪದ ವರ್ಮಾ ಲೇಔಟ್‌ನ ಖಾಲಿ ಜಾಗದಲ್ಲಿ ಅಪರಿಚಿತ ವ್ಯಕ್ತಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಒಡಿಶಾದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ರೈಲು ಮುಖಾಂತರ ನಗರಕ್ಕೆ ಅಕ್ರಮವಾಗಿ ತರುತ್ತಿದ್ದ. ಬಳಿಕ ಪರಿಚಿತ ಗ್ರಾಹಕರಿಗೆ ದುಬಾರಿ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದುದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.