ಬೆಂಗಳೂರು: ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಸೋಮವಾರ ಬೆಂಗಳೂರಿನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಮೈಶುಗರ್ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮುಖಂಡರು ಮನವಿ ಮಾಡಿದರು.
ರೈತ ಮುಖಂಡರಾದ ಸುನಂದಾ ಜಯರಾಂ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.