
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿ ವರಿಷ್ಠರ ಭೇಟಿಗಾಗಿ ಭಾನುವಾರ ದೆಹಲಿಗೆ ತೆರಳಿದ್ದಾರೆ.
ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸುಮಲತಾ ಬಯಸಿದ್ದು, ಟಿಕೆಟ್‌ಗೆ ಪಟ್ಟುಹಿಡಿದಿದ್ದರು. ಈಗ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ. ಸುಮಲತಾ ಮನವೊಲಿಕೆಗೆ ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.
ಸುಮಲತಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸೋಮವಾರ ಭೇಟಿ ಮಾಡಲಿದ್ದಾರೆ. ಚರ್ಚೆಯ ಬಳಿಕ ಅವರ ಸ್ಪರ್ಧೆಯ ಕುರಿತು ಸ್ಪಷ್ಟ ಚಿತ್ರಣ ದೊರಕುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.