ADVERTISEMENT

ಜ.10ಕ್ಕೆ ಆಂಬುಲೆನ್ಸ್ ಚಾಲಕರಿಗೆ ಉಚಿತ ಲಸಿಕೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 20:53 IST
Last Updated 8 ಜನವರಿ 2022, 20:53 IST

ಬೆಂಗಳೂರು: ಮಣಿಪಾಲ್ ಆಸ್ಪತ್ರೆಗಳ ಸಮೂಹವು ಆಂಬುಲೆನ್ಸ್ ಚಾಲಕರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಗೆಸೋಮವಾರ (ಜ.10)ತನ್ನ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆಯ ಮೂರನೇ ಡೋಸ್ ಅನ್ನು ಉಚಿತವಾಗಿ ವಿತರಿಸುವ ಅಭಿಯಾನವನ್ನು ಹಮ್ಮಿಕೊಂಡಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿಯಂತೆ ಒಂಬತ್ತು ತಿಂಗಳು ಮುಂಚೆಯೇ ಎರಡನೇ ಡೋಸ್ ಪಡೆದವರಿಗೆ ಬೆಳಿಗ್ಗೆ 9 ಗಂಟೆಯಿಂದ ಮೂರನೇ ಡೋಸ್ ಲಸಿಕೆ ಒದಗಿಸಲಾಗುತ್ತದೆ. ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಂಬುಲೆನ್ಸ್ ಚಾಲಕರು ಹಾಗೂಅರೆವೈದ್ಯಕೀಯ ಸಿಬ್ಬಂದಿ ಇದರ ಪ್ರಯೋಜನ ಪಡೆದುಕೊಳ್ಳಬಹುದು. ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ರಕ್ಷಣೆ ಒದಗಿಸುವುದು ಈ ಕಾರ್ಯಕ್ರಮದ ಹಿಂದಿನ ಉದ್ದೇಶ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

‌‘ಕೋವಿಡ್ ಮೊದಲೆರಡು ಅಲೆಯಲ್ಲಿ ಮುಂಚೂಣಿ ಕಾರ್ಯಕರ್ತರು ಪ್ರಾಣ ಭಯವನ್ನು ತೊರೆದು, ಕಾರ್ಯನಿರ್ವಹಿಸಿದ್ದಾರೆ. ಈಗ ಸೋಂಕು ಮತ್ತೆ ಹರಡಲಾರಂಭಿಸಿದೆ. ಮುಂದೆ ಎದುರಾಗುವ ಸವಾಲುಗಳನ್ನು ಎದುರಿಸಲು ಲಸಿಕೆ ಸಹಕಾರಿ. ಆದ್ದರಿಂದ ಆದ್ಯತೆ ಅನುಸಾರ ಲಸಿಕೆ ನೀಡಲು ಮುಂದಾಗಿದ್ದೇವೆ’ ಎಂದು ಆಸ್ಪ್ರತ್ರೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿ ಕಾರ್ತಿಕ್ ರಾಜಗೋಪಾಲ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.