ಬೆಂಗಳೂರು: ಕನಕಪುರ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯು ‘ನಮ್ಮ ಕೇರ್ ನಿಮ್ಮ ಮಣಿಪಾಲ್’ ಸಮುದಾಯ ಆರೋಗ್ಯ ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ಉಚಿತ ಶಸ್ತ್ರಚಿಕಿತ್ಸೆಗೆ ಬುಧವಾರ ಚಾಲನೆ ನೀಡಲಾಯಿತು.
ಮಣಿಪಾಲ್ ಫೌಂಡೇಷನ್ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುತ್ತಮುತ್ತಲಿನ 30 ಅಪಾರ್ಟ್‌ಮೆಂಟ್‌ಗಳ ಸಂಘದ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ಕೈ ಜೋಡಿಸಿದ್ದು, ಇವರು ಶಿಫಾರಸು ಮಾಡುವ ಹತ್ತು ಬಡ ಸಿಬ್ಬಂದಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ.
‘ಭದ್ರತಾ ಸಿಬ್ಬಂದಿ, ಮನೆಗೆಲಸದವರು, ಸ್ವಚ್ಛತಾ ಕಾರ್ಯಕರ್ತರು ಸೇರಿ ಅಪಾರ್ಟ್‌ಮೆಂಟ್‌ಗಳಲ್ಲಿ ಕಾರ್ಯನಿರ್ವಹಿಸುವ ಬಡ ಸಿಬ್ಬಂದಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಗುಣಮಟ್ಟದ ಆರೈಕೆಯನ್ನು ಒದಗಿಸಲಾಗುತ್ತದೆ. ನೆರೆಹೊರೆ ಸಮುದಾಯದ ನಂಬಿಕೆಯನ್ನು ಗೌರವಿಸುವುದು ನಮ್ಮ ಧ್ಯೇಯವಾಗಿದೆ’ ಎಂದು ಮಣಿಪಾಲ್ ಆಸ್ಪತ್ರೆಗಳ ಸಮೂಹದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕಾರ್ತಿಕ್ ರಾಜಗೋಪಾಲ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.