ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.
ಎನ್. ಜಯರಾಂ ಅವರು ಮೇ 31ರಂದು ನಿವೃತ್ತರಾದಾಗ, ಮಣಿವಣ್ಣನ್ ಅವರಿಗೆ ಬಿಡಿಎ ಆಯಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶದ ಪ್ರಕಾರ, ಬಿಡಿಎ ಆಯುಕ್ತರ ಹುದ್ದೆ ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಮಣಿವಣ್ಣನ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.