ADVERTISEMENT

ಸ್ವಯಂಸೇವಕರಿಗೆ ಧೈರ್ಯ ತುಂಬಿದ ಮಣಿವಣ್ಣನ್

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 20:19 IST
Last Updated 30 ಜುಲೈ 2020, 20:19 IST
ಸಿಂಗಸಂದ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರವನ್ನು ಪರಿಶೀಲಿಸಿದ ಪಿ. ಮಣಿವಣ್ಣನ್. ಆರೋಗ್ಯಾಧಿಕಾರಿ ಡಾ.ಸುರೇಶ್, ಜಂಟಿ ಆಯುಕ್ತ ರಾಮಕೃಷ್ಣ ಇದ್ದಾರೆ.
ಸಿಂಗಸಂದ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರವನ್ನು ಪರಿಶೀಲಿಸಿದ ಪಿ. ಮಣಿವಣ್ಣನ್. ಆರೋಗ್ಯಾಧಿಕಾರಿ ಡಾ.ಸುರೇಶ್, ಜಂಟಿ ಆಯುಕ್ತ ರಾಮಕೃಷ್ಣ ಇದ್ದಾರೆ.   

ಬೊಮ್ಮನಹಳ್ಳಿ: ‘ಕೊರೊನಾಗೆ ತಡೆಯೊಡ್ಡಲು ಸ್ವಯಂಸೇವಕರು ಸೈನಿಕರಂತೆ ಕರ್ತವ್ಯ ನಿರ್ವಹಿಸಬೇಕು’ ಎಂದು ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಕೋವಿಡ್ ಉಸ್ತುವಾರಿ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್ ಸಲಹೆ ನೀಡಿದರು.

ಗುರುವಾರ ಬೊಮ್ಮನಹಳ್ಳಿ ವಲಯದ ಸಿಂಗಸಂದ್ರ ವಾರ್ಡ್‌ನಲ್ಲಿ ಕೋವಿಡ್ ಪರೀಕ್ಷೆ ಪ್ರಗತಿಯನ್ನು ಖುದ್ದು ಮನೆಗಳಿಗೆ ತೆರಳಿ ಪರೀಕ್ಷಿಸಿ ಮಾತನಾಡಿದರು.

ಈ ವಲಯದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಕೋವಿಡ್ ಪರೀಕ್ಷೆ ಮಾಡಲು ವಾರ್ಡ್ ಮಟ್ಟದಲ್ಲಿ ಕೋವಿಡ್ ವಾರ್ ರೂಂ ತೆರೆಯಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಆಸ್ಪತ್ರೆ ಸಿಬ್ಬಂದಿ ಜೊತೆಯಲ್ಲಿ ಪರೀಕ್ಷೆ ಮಾಡಲು ಉತ್ಸಾಹಿ ಯುವಕ, ಯುವತಿಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಮುಂದೆ ಬಂದಲ್ಲಿ ಅವರಿಗೆ ವಾಹನ ಹಾಗೂ ಊಟದ ವ್ಯವಸ್ಥೆಯ ಜೊತೆಗೆ ತಿಂಗಳಿಗೆ ₹20 ಸಾವಿರ ಸಂಭಾವನೆಯನ್ನೂ ನೀಡಲಾಗುತ್ತದೆ ಎಂದರು.

ADVERTISEMENT

ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತ ರಾಮಕೃಷ್ಣ ‘ಬೊಮ್ಮನಹಳ್ಳಿಯ 16 ವಾರ್ಡ್‍ಗಳಲಿ 16 ಕೋವಿಡ್ ವಾರ್ ಸೆಂಟರ್ ತೆರೆಯಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.