ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಶೀಗೇಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶೀಗೇಹಳ್ಳಿ ಗ್ರಾಮ ಪಂಚಾಯಿತಿಯ ಪ್ರಸಕ್ತ ಸಾಲಿನ ಮೊದಲನೇ ಸುತ್ತಿನ ಗ್ರಾಮ ಸಭೆಯನ್ನು ಶಾಸಕಿ ಮಂಜುಳಾ ಲಿಂಬಾವಳಿ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ‘ಶೀಗೇಹಳ್ಳಿ ಮತ್ತು ಕೆ.ದೊಮ್ಮಸಂದ್ರ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪ್ರಗತಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಬೇಕು’ ಎಂದು ತಿಳಿಸಿದರು.
‘ಸಾರ್ವಜನಿಕರು ಪ್ರತಿ ಗ್ರಾಮಸಭೆಯಲ್ಲಿ ಪಾಲ್ಗೊಂಡು, ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಸಮಸ್ಯೆಗಳಿದ್ದರೆ ಸಭೆಯಲ್ಲಿ ತಿಳಿಸಬೇಕು, ಪರಿಹಾರ ಪಡೆಯಬೇಕು’ ಎಂದು ಸಲಹೆ ನೀಡಿದರು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಗಳಾ ಮಾತನಾಡಿ, ‘ಶೀಗೆಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು’ ಎಂದರು.
ಇದೇ ವೇಳೆ ಅಂಗವಿಕಲರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಮಾಡಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ, ಉಪಾಧ್ಯಕ್ಷ ಸುರೇಶ್ ಬಾಬು, ಪಿಡಿಒ ಸುರೇಶ್ ಸಭೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.