
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಕೂಡಲ ಸಂಗಮ, ಬಸವಕಲ್ಯಾಣ ಸೇರಿ ಬಸವಾದಿ ಶರಣರ ಸ್ಥಳಗಳನ್ನು ಅಂತರರಾಷ್ಟ್ರೀಯ ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಬೇಕು. ಈ ಸಂಬಂಧ ಮುಂಬರುವ ಬಜೆಟ್‌ನಲ್ಲಿ ಕನಿಷ್ಠ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮನು ಬಳಿಗಾರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವುದನ್ನು ಸ್ವಾಗತಿಸಿರುವ ಅವರು, ‘ಈ ಘೋಷಣೆಯಿಂದ ನಾಡಿಗೆ ಹೊಸ ಚೈತನ್ಯ ಸಿಕ್ಕಂತಾಗಿದೆ. ವಿವಿಧ ಶರಣರ ತತ್ವ ಹಾಗೂ ಸಾಹಿತ್ಯವನ್ನು ಪ್ರಸಾರ ಮಾಡುವ ಕೆಲಸವಾಗಬೇಕು. ಶಿವಶರಣರ ಸ್ಥಳಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಟ್ಟು, ಕಾರ್ಯಕ್ರಮಗಳನ್ನು ಘೋಷಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.