ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಶುಭಾಶಯ ಕೋರಲು, ಸಂಭ್ರಮ ಆಚರಿಸಲು ಬಂದಿದ್ದ ವೇಳೆ ಉಂಟಾದ ಕಾಲ್ತುಳಿತಕ್ಕೆ 11 ಮಂದಿ ಸಾವಿಗೀಡಾಗಿ, 33 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಭ್ರಮಾಚರಣೆ ಮೊದಲೇ ನಿಗದಿಯಾಗಿದ್ದರೂ ಸೂಕ್ತ ವ್ಯವಸ್ಥೆ ಮಾಡದ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಈ ಸಾವುಗಳಿಗೆ ಹೊಣೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಮೃತರ ಕುಟುಂಬದವರಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.