ADVERTISEMENT

ಕೋವಿಡ್‌: ಮಾರುಕಟ್ಟೆಗಳ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 16:59 IST
Last Updated 14 ಜನವರಿ 2022, 16:59 IST

ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದ ನಾಲ್ಕು ವ್ಯಾಪಾರ ಕೇಂದ್ರಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬಿಬಿಎಂಪಿ ಆದೇಶಿಸಿದೆ.

ಕೆ.ಆರ್.ಮಾರುಕಟ್ಟೆಯ ಹೂವಿನ ಮಾರುಕಟ್ಟೆಯಲ್ಲಿ ಹರಾಜಿನಲ್ಲಿ (ಬೆಳಿಗ್ಗೆ 3ರಿಂದ 6 ಗಂಟೆ ತನಕ) ಪಾಲ್ಗೊಳ್ಳುವ ಮಾರಾಟಗಾರರು (ಮಳಿಗೆದಾರರನ್ನು ಹೊರತುಪಡಿಸಿ) ಬಿನ್ನಿಪೇಟೆಯ ಎಪಿಎಂಸಿ ಮಾರುಕಟ್ಟೆಗೆ ಸ್ಥಳಾಂತರ ಆಗಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಕೆ.ಆರ್.ಮಾರುಕಟ್ಟೆಯಲ್ಲಿ ತರಕಾರಿ ಮತ್ತು ಹಣ್ಣು ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಿಗಳನ್ನು ಎನ್‌.ಟಿ. ಪೇಟೆ ಮುಖ್ಯರಸ್ತೆ, ಗುಂಡಪ್ಪರಸ್ತೆ, ಅವೆನ್ಯೂ ಮುಖ್ಯರಸ್ತೆಗೆ ಸ್ಥಳಾಂತರಿಸಲಾಗಿದೆ. ಕಡ್ಡಾಯವಾಗಿ ತಳ್ಳು ಗಾಡಿಯಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚಿಸಿದೆ.

ADVERTISEMENT

ಕಲಾಸಿಪಾಳ್ಯದ ಜಯಚಾಮರಾಜೇಂದ್ರ ಸಗಟು ತರಕಾರಿ ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಿಗಳನ್ನು ಸಿಲ್ವರ್ ಜ್ಯೂಬಿಲಿ ಪಾರ್ಕ್ ರಸ್ತೆಗೆ ಸ್ಥಳಾಂತರಿಸಲಾಗಿದೆ. ಕಡ್ಡಾಯವಾಗಿ ತಳ್ಳುಗಾಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ತಿಳಿಸಿದೆ. ಕಲಾಸಿಪಾಳ್ಯದ ಸಗಟು ತರಕಾರಿ ಮಾರುಕಟ್ಟೆಯಲ್ಲಿನ ವ್ಯಾಪಾರ ಸಮಯವನ್ನು ಬೆಳಿಗ್ಗೆ 3 ಗಂಟೆಯಿಂದ ಮಧ್ಯಾಹ್ನ 3 ಗಂಟೆ ತನಕ ಸೀಮಿತಗೊಳಿಸಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.