ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರದ ನಿರ್ಮಾಪಕರಿಗೆ ₹2.50 ಕೋಟಿ ವಂಚಿಸಿರುವ ಆರೋಪದಡಿ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಸಂಸ್ಥೆಯ ನಿರ್ದೇಶಕ ಸತ್ಯರೆಡ್ಡಿ ಅವರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಿರ್ಮಾಪಕ ಉದಯ್ ಎ. ಮೆಹ್ತಾ ಅವರು ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
‘ಮಾರ್ಟಿನ್: ಸಿನಿಮಾಕ್ಕೆ ಸಿ.ಜಿ ಹಾಗೂ ವಿಎಫ್ಎಕ್ಸ್ (ಗ್ರಾಫಿಕ್ಸ್) ಕೆಲಸ ಮಾಡಿಕೊಡುವ ವಿಚಾರದಲ್ಲಿ ಸತ್ಯರೆಡ್ಡಿ, ಸುನೀಲ್ ಸೇರಿದಂತೆ ಮೂವರು ಹಣ ಪಡೆದು ಮೋಸ ಎಸಗಿದ್ದಾರೆ. ಹಂತಹಂತವಾಗಿ ಹಣ ಪಡೆದುಕೊಂಡಿದ್ದರು ಎಂದು ಆರೋಪಿಸಿ ದೂರು ನೀಡಲಾಗಿತ್ತು. ಆ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.