ADVERTISEMENT

ಚಿಕ್ಕಪೇಟೆ ಮೆಟ್ರೊ ನಿಲ್ದಾಣದ ಬಳಿಯ ಫ್ಯಾನ್ಸಿ ಸ್ಟೋರ್‌ನಲ್ಲಿ ಭಾರಿ ಅಗ್ನಿ ಅವಘಡ

ಕಾರ್ಯಾಚರಣೆ ವೇಳೆ ಅಗ್ನಿಶಾಮಕ ದಳದ ಆರು ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 10:45 IST
Last Updated 25 ಫೆಬ್ರುವರಿ 2026, 10:45 IST
   

ಬೆಂಗಳೂರು: ಚಿಕ್ಕಪೇಟೆ ಮೆಟ್ರೊ ನಿಲ್ದಾಣದ ಬಳಿಯ ಫ್ಯಾನ್ಸಿ ಸ್ಟೋರ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಅಗ್ನಿಶಾಮಕದ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾರ್ಯಾಚರಣೆ ವೇಳೆ ಹೊಗೆಯಿಂದ ಆರು ಮಂದಿ ಅಗ್ನಿಶಾಮಕ ದಳದ ಸಿಬ್ಬಂದಿ ಅಸ್ವಸ್ಥರಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಗ್ನಿಶಾಮಕ ದಳದ ಆರು ವಾಹನಗಳನ್ನು ಬೆಂಕಿ ನಂದಿಸುವ ಕಾರ್ಯಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ದಟ್ಟ ಹೊಗೆ ಆವರಿಸಿಕೊಂಡಿದ್ದು, ಆಕ್ಸಿಜನ್ ಸಿಲಿಂಡರ್, ಮಾಸ್ಕ್ ಧರಿಸಿ ಅಗ್ನಿಶಾಮಕ ದಳದ ಉಳಿದ ಸಿಬ್ಬಂದಿ ಅಂಗಡಿ ಒಳಗೆ ಹೋಗಿ, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.