ಗಿರೀಶ್ ಮಟ್ಟೆಣ್ಣವರ
ಬೆಂಗಳೂರು: ಗಿರೀಶ್ ಮಟ್ಟೆಣ್ಣವರ ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಹಾಗೂ ಗೃಹ ಕಾರ್ಯದರ್ಶಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮನವಿ ಸಲ್ಲಿಸಿದ್ದಾರೆ.
‘ಪ್ರಕರಣವು ನ್ಯಾಯಾಲಯದಲ್ಲಿ ಖುಲಾಸೆಯಾಗಿದೆ. ಆದರೆ, ಇದೀಗ ಆ ಪ್ರಕರಣವನ್ನು ಮತ್ತೆ ಮರು ತನಿಖೆಗೆ ಒಳಪಡಿಸಬೇಕು’ ಎಂದು ಪ್ರಶಾಂತ್ ಸಂಬರಗಿ ಆಗ್ರಹಿಸಿದ್ದಾರೆ.
‘ಗಿರೀಶ್ ಅವರನ್ನು ಎನ್ಐಎ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೂ ಒಳಪಡಿಸಬೇಕು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.