ADVERTISEMENT

ಚುನಾವಣೆ | ಮೇಯರ್‌ ಸ್ಥಾನ ಬಿಜೆಪಿ ಅಭ್ಯರ್ಥಿ ಆಯ್ಕೆ ಕಗ್ಗಂಟು

ಸತ್ಯನಾರಾಯಣ ಕಾಂಗ್ರೆಸ್‌ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2019, 20:26 IST
Last Updated 30 ಸೆಪ್ಟೆಂಬರ್ 2019, 20:26 IST
   

ಬೆಂಗಳೂರು: ಮೇಯರ್‌ ಚುನಾವಣೆಗೆ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಬಿಜೆಪಿ ಪಾಲಿಗೆ ಕಗ್ಗಂಟಾಗಿಯೇ ಉಳಿದಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಸೋಮವಾರ ರಾತ್ರಿ ಪಕ್ಷದ
ಕಾರ್ಪೊರೇಟರ್‌ಗಳು ಹಾಗೂ ಶಾಸಕರ ಸಭೆ ನಡೆಯಿತಾದರೂ, ಅಭ್ಯರ್ಥಿ ಯಾರು ಎಂಬ ಬಗ್ಗೆ
ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಲಿಲ್ಲ.

ಪದ್ಮನಾಭ ರೆಡ್ಡಿ, ಮಂಜುನಾಥ ರಾಜು, ಎಲ್. ಶ್ರೀನಿವಾಸ್‌ ಹಾಗೂ ಮುನೀಂದ್ರ ಕುಮಾರ್‌ ನಡುವೆ ಪೈಪೋಟಿ ಏರ್ಪಟ್ಟಿತ್ತು. ಈ ನಾಲ್ವರ ಪೈಕಿ ಒಬ್ಬರನ್ನು ಆಯ್ಕೆ ಮಾಡುವ ಸಲುವಾಗಿ ಸಚಿವರಾದ ಸಿ.ಎನ್‌.ಅಶ್ವತ್ಥನಾರಾಯಣ, ಆರ್‌.ಅಶೋಕ, ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಐವರನ್ನು ಒಳಗೊಂಡ ಉಪಸಮಿತಿ ರಚಿಸಲಾಯಿತು. ಸಮಿತಿಯು ಅಂತಿಮ ಸುತ್ತಿನ ಮಾತುಕತೆ ನಡೆಸಿದರೂ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

‘ಇಬ್ಬರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ. ಅವರಿಬ್ಬರ ಪೈಕಿ ಒಬ್ಬರ ಹೆಸರನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಂತಿಮಗೊಳಿಸಲಿದ್ದಾರೆ’ ಎಂದು ಸಭೆಯಲ್ಲಿ ಭಾಗವಹಿಸಿದ ಶಾಸಕರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.