ADVERTISEMENT

ಭಾರತ ಹಾಗೂ ಡೆನ್ಮಾರ್ಕ್‌ ವಾಣಿಜ್ಯೋದ್ಯಮ ಸಂಘದ ಜೊತೆ ಎಂ.ಬಿ ಪಾಟೀಲ ಸಭೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 19:48 IST
Last Updated 21 ಜೂನ್ 2025, 19:48 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ಬೆಂಗಳೂರು: ಬಿಯರ್‌ ಮತ್ತು ಇತರ ಪಾನೀಯ ತಯಾರಿಸುವ ಡೆನ್ಮಾರ್ಕ್‌ನ ಜಾಗತಿಕ ಕಂಪನಿ ಕಾರ್ಲ್ಸ್‌ಬರ್ಗ್‌ ಗ್ರೂಪ್‌, ರಾಜ್ಯದಲ್ಲಿ ₹350 ಕೋಟಿ ಬಂಡವಾಳ ಹೂಡಿಕೆಯ ಒಪ್ಪಂದದ ಪ್ರಗತಿಯನ್ನು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಪರಿಶೀಲಿಸಿದರು.

ಡೆನ್ಮಾರ್ಕ್‌ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವರು, ಕಂಪನಿಯ ಸಿಇಒ ಜಾಕೊಬ್‌ ಆರಪ್‌ ಆ್ಯಂಡರ್ಸನ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕಾರ್ಲ್ಸ್‌ಬರ್ಗ್‌ ಸೇರಿದಂತೆ ಕೆಕೆ ವಿಂಡ್‌ ಸೊಲುಷನ್ಸ್‌, ನೊವೊನೆಸಿಸ್‌, ನೊವೊ ನಾರ್ಡಿಸ್ಕ್‌, ಡೆನ್ಮಾರ್ಕ್‌ ಕೈಗಾರಿಕಾ ಒಕ್ಕೂಟ (ಡಿಐ) ಮತ್ತು ಭಾರತ ಹಾಗೂ ಡೆನ್ಮಾರ್ಕ್‌ ವಾಣಿಜ್ಯೋದ್ಯಮ ಸಂಘ (ಐಡಿಸಿಸಿ) ಜೊತೆ ಸಭೆ ನಡೆಸಿದರು.

ADVERTISEMENT

ಔಷಧಿ ತಯಾರಿಕೆಯ ಜಾಗತಿಕ ಪ್ರಮುಖ ಕಂಪನಿ ನೊವೊ ನಾರ್ಡಿಸ್ಕ್‌ ಜೊತೆಗಿನ ಸಭೆಯಲ್ಲಿ ಸಚಿವ ಪಾಟೀಲ ಅವರು ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಕೋರಿದರು.

ವಾಣಿಜ್ಯ ಬಾಂಧವ್ಯ ವೃದ್ಧಿಸಲು ಬೆಂಗಳೂರಿನಲ್ಲಿ ಕಚೇರಿ ಆರಂಭಿಸಲು ಸಚಿವ ಪಾಟೀಲ ಅವರು ‘ಐಡಿಸಿಸಿ’ಗೆ ಆಹ್ವಾನ ನೀಡಿದರು. ರೋಡ್‌ಷೋನಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್‌. ಸೆಲ್ವಕುಮಾರ್‌, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್‌, ಕೆಐಎಡಿಬಿ ಮುಖ್ಯ ಎಂಜಿನಿಯರ್ ವೀರಭದ್ರಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.