
ಬೆಂಗಳೂರು: ರಾಜ್ಯದ ಎಂಟು ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ 2026-27ನೇ ಶೈಕ್ಷಣಿಕ ವರ್ಷದಿಂದ ಎಂಡಿ–ಎಂಎಸ್ ಕೋರ್ಸ್‌ಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆ ಮತ್ತು ಕೆ.ಸಿ. ಜನರಲ್ ಆಸ್ಪತ್ರೆ, ವಿಜಯಪುರ, ಬಾಗಲಕೋಟೆ, ತುಮಕೂರು, ಕೋಲಾರ, ರಾಮನಗರ ಮತ್ತು ಮೈಸೂರು ಜಿಲ್ಲಾ ಆಸ್ಪತ್ರೆಗಳು ಈ ಕೋರ್ಸ್‌ಗಳನ್ನು ಪ್ರಾರಂಭಿಸಲು ಆಯ್ಕೆಯಾಗಿವೆ. ಈ ಕೋರ್ಸ್‌ಗಳ ಸಂಪೂರ್ಣ ಸಂಯೋಜನೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ನೀಡಲಾಗಿದೆ.
ಜಿಲ್ಲಾ ಆಸ್ಪತ್ರೆಗಳಲ್ಲಿ ಈ ಕೋರ್ಸ್‌ಗಳನ್ನು ಪ್ರಾರಂಭಿಸುವುದರಿಂದ, ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣವನ್ನು ತೃತೀಯ ಹಂತದ ಕೇಂದ್ರಗಳಿಂದ ವಿಕೇಂದ್ರೀಕರಣಗೊಳಿಸಲು ಸಾಧ್ಯವಾಗಲಿದೆ. ಸರ್ಕಾರಿ ಸೇವೆಯಲ್ಲಿ ತಜ್ಞ ವೈದ್ಯರ ಸಂಖ್ಯೆ ಹೆಚ್ಚಿಸಲು, ಜಿಲ್ಲಾ ಮಟ್ಟದ ದ್ವಿತೀಯ ಹಂತದ ಆರೈಕೆ ಹಾಗೂ ಶೈಕ್ಷಣಿಕ ಸಾಮರ್ಥ್ಯ ಬಲಪಡಿಸಲು ಸಾಧ್ಯ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.