ADVERTISEMENT

ಜಾಗೃತಿ ಅಭಿಯಾನ: ವಿದ್ಯಾರ್ಥಿಗಳೊಂದಿಗೆ ಸಂವಹನ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 19:42 IST
Last Updated 25 ಮಾರ್ಚ್ 2019, 19:42 IST
ಗ್ರಾಮ ಪಂಚಾಯಿತಿ ಹಕ್ಕೋತ್ತಾಯ ಆಂದೋಲನ ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಗ್ರಾಮ ಪಂಚಾಯಿತಿ ಹಕ್ಕೋತ್ತಾಯ ಆಂದೋಲನ ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು   

ಬೆಂಗಳೂರು: ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಎಂದುಹೋಟೆಲ್ ಮತ್ತು ಚಿಲ್ಲರೆ ನಿರ್ವಹಣೆ ಕ್ಷೇತ್ರದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಘಂಟಾಘೋಷವಾಗಿ ಸಾರಿದರು.

ಗ್ರಾಮ ಪಂಚಾಯಿತಿ ಹಕ್ಕೋತ್ತಾಯ ಆಂದೋಲನ ನಗರದಲ್ಲಿ ಸೋಮವಾರ ಆಯೋಜಿಸಿದ್ದ‘ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ’ ಜಾಗೃತಿ ಅಭಿಯಾನದಲ್ಲಿ ಅವರು ಪಾಲ್ಗೊಂಡಿದ್ದರು.

ಲೋಕಸಭಾ ಚುನಾವಾಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳುವ ಪ್ರಮುಖ ವಿಚಾರಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಲಾಯಿತು.ತಮ್ಮ ಗ್ರಾಮ ಹಾಗೂ ನಗರಗಳಲ್ಲಿನ ಕಾಲೇಜು ಹಾಗೂ ಸಮುದಾಯಗಳಲ್ಲೂ ಜಾಗೃತಿ ಮೂಡಿಸುವಂತೆ ಸಂಘಟಕರು ಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.