
ಮಾಂಸ
ಬೆಂಗಳೂರು: ಇದೇ ಫೆಬ್ರುವರಿ 15ರ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಈ ಕುರಿತು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಭಾನುವಾರ ಮಹಾ ಶಿವರಾತ್ರಿ ಆಚರಿಸಲ್ಪಡುವುದರಿಂದ ಆ ದಿನವಿಡಿ ಜಿಬಿಎ ವ್ಯಾಪ್ತಿಯ ಎಲ್ಲಿಯೂ ಪ್ರಾಣಿ ವಧೆ, ಮಾಂಸ ಮಾರಾಟ ಮಾಡಲು ಯಾವುದೇ ಅವಕಾಶ ಇರುವುದಿಲ್ಲ. ಅಲ್ಲದೇ ಸೂಪರ್ ಮಾರ್ಕೆಟ್, ಇನ್ನೀತರ ಮಳಿಗೆಗಳಲ್ಲಿಯೂ ಮಾಂಸ ಮಾರಾಟಕ್ಕೆ ಆಸ್ಪದ ಇಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ, ಪ್ರಾಣಿ ವಧೆ ಮಾಡಿದರೆ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿರು ಎಕ್ಸ್‌ನಲ್ಲಿ ಜಿಬಿಎ ಪೋಸ್ಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.