ADVERTISEMENT

ವಿಶ್ವ ಸಂವಾದ ಕೇಂದ್ರ ಕರ್ನಾಟಕ ವತಿಯಿಂದ ಮಾಧ್ಯಮ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 20:18 IST
Last Updated 23 ಜೂನ್ 2025, 20:18 IST
   

ಬೆಂಗಳೂರು: ವಿಶ್ವ ಸಂವಾದ ಕೇಂದ್ರ ಕರ್ನಾಟಕ (ವಿಎಸ್‌ಕೆ) ನೀಡುವ 2025ನೇ ಸಾಲಿನ ‘ವಿಎಸ್‌ಕೆ ಮಾಧ್ಯಮ ಪ್ರಶಸ್ತಿ’ ಪ್ರಕಟವಾಗಿದೆ. 

‘ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿ’ಗೆ ಕನ್ನಡಪ್ರಭ ಪತ್ರಿಕೆಯ ಪ್ರಧಾನ ಸಂಪಾದಕ ರವಿ ಹೆಗಡೆ, ‘ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಸುಧರ್ಮಾ ಪತ್ರಿಕೆಯ ಸಂಪಾದಕಿ ಕೆ.ಎಸ್. ಜಯಲಕ್ಷ್ಮಿ, ‘ಎಂ.ವಿ. ಕಾಮತ್ ಪತ್ರಿಕೋದ್ಯಮ ಪ್ರಶಸ್ತಿ’ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಸಹಾಯಕ ಸ್ಥಾನಿಕ ಸಂಪಾದಕ ರಾಮು ಪಾಟೀಲ್, ‘ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿ’ಗೆ ನ್ಯೂಸ್‌ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಸಾದ್.ಎ, ‘ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿ’ಗೆ ಹೊಸದಿಗಂತ ಪತ್ರಿಕೆಯ ಅಂಕಣಕಾರ ರಾಧಾಕೃಷ್ಣ ಕಲ್ಚಾರ್ ಹಾಗೂ ‘ವಿಎಸ್‌ಕೆ ಡಿಜಿಟಲ್‌ ಮೀಡಿಯಾ ಪ್ರಶಸ್ತಿ’ಗೆ ಟಿ.ವಿ ವಿಕ್ರಮದ ನಿರೂಪಕಿ ಮುಮ್ತಾಜ್ ಅಬ್ದುಲ್ ನೆಲ್ಯಡ್ಕ ಆಯ್ಕೆಯಾಗಿದ್ದಾರೆ. 

ಜೂನ್‌ 29ರಂದು ಬೆಳಿಗ್ಗೆ 10.30ಕ್ಕೆ ಬಸವನಗುಡಿಯ ಬಿ.ಎಂ.ಎಸ್. ಎಂಜಿನಿಯರಿಂಗ್‌ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮ ದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಸಹಬೌದ್ಧಿಕ್ ಪ್ರಮುಖ್ ಸುಧೀರ್, ವಿಎಸ್‌ಕೆಯ ಅಧ್ಯಕ್ಷ ವಿ. ಶ್ರೀಧರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.