
ಪ್ರಜಾವಾಣಿ ವಾರ್ತೆಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ನಟಿ ಸಂಜನಾ ಗಲ್ರಾನಿ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಗೆ ಕರದೊಯ್ದಿದ್ದಾರೆ.
ಇಂದಿರಾನಗರದಲ್ಲಿರುವ ಮನೆಯಿಂದ ಸಂಜನಾ ಅವರನ್ನು ವಶಕ್ಕೆ ಪಡೆದು ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಕರೆತಂದಿದ್ದ ಸಿಸಿಬಿ ಪೊಲೀಸರು, ಗಂಟೆಗಟ್ಟಲೇ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ. ಇದಾದ ನಂತರ, ಅವರನ್ನು ವೈದ್ಯಕೀಯ ಹಾಗೂ ಕೊರೊನಾ ಸೋಂಕು ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಂಜನಾ ಅವರನ್ನು ಸದ್ಯಕ್ಕೆ ಪೊಲೀಸರ ವಶದಲ್ಲಿದ್ದಾರೆ. ವೈದ್ಯಕೀಯ ಹಾಗೂ ಕೊರೊನಾ ಪರೀಕ್ಷಾ ವರದಿ ಬಂದ ನಂತರವೇ ಸಂಜನಾ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.