ADVERTISEMENT

ಸಚಿವ ಈಶ್ವರಪ್ಪ ನಿವಾಸದಲ್ಲಿ ಕುರುಬ ಸಮಾಜದ ನಾಯಕರ ಸಭೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 8:14 IST
Last Updated 27 ಸೆಪ್ಟೆಂಬರ್ 2020, 8:14 IST
ಸಚಿವ ಕೆ.ಎಸ್. ಈಶ್ವರಪ್ಪ ನಿವಾಸದಲ್ಲಿ ನಾಯಕರ ಸಭೆಗೂ ಮುನ್ನ ದೀಪ ಬೆಳಗಿಸಲಾಯಿತು
ಸಚಿವ ಕೆ.ಎಸ್. ಈಶ್ವರಪ್ಪ ನಿವಾಸದಲ್ಲಿ ನಾಯಕರ ಸಭೆಗೂ ಮುನ್ನ ದೀಪ ಬೆಳಗಿಸಲಾಯಿತು   

ಬೆಂಗಳೂರು: ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರ ಮನೆಯಲ್ಲಿ ನಾಲ್ಕು ಮಠದ ಸ್ವಾಮೀಜಿಗಳು ಮತ್ತು ಸರ್ವ ಪಕ್ಷದ ನಾಯಕರುಗಳು ನೇತೃತ್ವದಲ್ಲಿ ಕುರುಬರ ಎಸ್‌ಟಿ ಹೋರಾಟದ ರೂಪುರೇಷೆ ಕುರಿತು ಸಭೆ ನಡೆಯುತ್ತಿದೆ.

ಸಭೆಯಲ್ಲಿ ಸಚಿವ ಈಶ್ವರಪ್ಪ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ರಘುನಾಥ್ ಮಲ್ಕಾಪುರೆ, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ಮಾಜಿ ಮೇಯರ್ ರಾಮಚಂದ್ರಪ್ಪ ಮುಕುಟಪ್ಪ ಸೇರಿದಂತೆ 100 ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ.

ಸಮಾಜದ ನಾಲ್ಕು ಮಠಾಧಿಶರು ಮತ್ತು ಕುರುಬ ಸಂಘದ ಪದಾಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.