ADVERTISEMENT

ಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 20:56 IST
Last Updated 8 ಜೂನ್ 2020, 20:56 IST

ಬೆಂಗಳೂರು: ಲಾಕ್‌ಡೌನ್ ‌5.0 ಮಾರ್ಗಸೂಚಿ ಜಾರಿಯಲ್ಲಿರುವುದರಿಂದ ವಿಧಾನಪರಿಷತ್ತಿನ ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಮುಂದೂಡಲು ಚುನಾವಣಾ ಆಯೋಗ ನಿರ್ಧರಿಸಿದೆ.

ಈ ಕ್ಷೇತ್ರಗಳಿಂದ ಆಯ್ಕೆಯಾಗಿದ್ದ ಸದಸ್ಯರ ಅವಧಿ ಇದೇ 30 ರಂದು ಪೂರ್ಣಗೊಳ್ಳಲಿದೆ. ಆದರೆ, ಲಾಕ್‌ಡೌನ್‌ನಿಂದ ನಿಗದಿತ ಅವಧಿಯಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಲಾಗುವುದು ಎಂದು ಆಯೋಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT