ADVERTISEMENT

ಕೆ.ಆರ್‌.ಪುರಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 15:53 IST
Last Updated 27 ಜುಲೈ 2024, 15:53 IST
ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರಿಗೆ ಮನವಿ ಸಲ್ಲಿಸಿದರು.
ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರಿಗೆ ಮನವಿ ಸಲ್ಲಿಸಿದರು.   

ಕೆ.ಆರ್.ಪುರ: ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹಾಗೂ ಮಹದೇವಪುರ ಕ್ಷೇತ್ರಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಮತ್ತು ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರಿಗೆ ಮನವಿ ಸಲ್ಲಿಸಿದರು.

ಕೆ.ಆರ್.ಪುರ, ಮಹದೇವಪುರ ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಇನ್ನಿತರ ಸೌಕರ್ಯಗಳ ಕೊರತೆಯಿದೆ. ಸಮಸ್ಯೆ ಪರಿಹರಿಸಲು ಹಲವಾರು ಬಾರಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ಗುಂಜೂರು ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಬೇಕು, ಅಂಬೇಡ್ಕರ್ ಭವನಕ್ಕೆ ಭೂಮಿ ಮೀಸಲಿಡಬೇಕು. ಒತ್ತುವರಿಯಾಗಿರುವ ಸ್ಮಶಾನ ಜಾಗ ತೆರವು ಮಾಡಬೇಕು ಎಂದು ಪ್ರಜಾ ವಿಮೋಚನಾ ಚಳವಳಿ ಸಂಘಟನೆ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ಒತ್ತಾಯಿಸಿದರು.

ADVERTISEMENT

ಗುಂಜೂರು, ಮಾರತ್ತಹಳ್ಳಿ, ರಾಮಗೊಂಡನಹಳ್ಳಿ, ವರ್ತೂರು ಗ್ರಾಮಗಳ ವಸತಿ ರಹಿತ ಬಡ ಕುಟುಂಬಗಳು ವಸತಿಗಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರ ಇತ್ಯರ್ಥಪಡಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಅದೂರು ಕೆ.ದೇವರಾಜ್ ಅವರು ಒತ್ತಾಯಿಸಿದರು.

ಬೆಂಗಳೂರು ವಿಭಾಗೀಯ ಘಟಕದ ಅಧ್ಯಕ್ಷ ಮಾದೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.