ADVERTISEMENT

ಮಾನಸಿಕ ಆರೋಗ್ಯ ಕಾಯ್ದೆ: ನಿಯಮ ರೂಪಿಸಲು ಹೈಕೋರ್ಟ್‌ ಗಡುವು

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 20:21 IST
Last Updated 24 ಫೆಬ್ರುವರಿ 2020, 20:21 IST

ಬೆಂಗಳೂರು: ‘ಮಾನಸಿಕ ಆರೋಗ್ಯ ಪಾಲನೆ ಕಾಯ್ದೆ-2017ರಡಿ ರಾಜ್ಯ ಸರ್ಕಾರವು ರೂಪಿಸಿರುವ ನಿಯಮಗಳಿಗೆ ಮಾರ್ಚ್ 21ರೊಳಗೆ ಅನುಮೋದನೆ ನೀಡಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಗಡುವು ನೀಡಿದೆ.

ಈ ಕುರಿತಂತೆ ಎನ್.ಸಂಜಯ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವೈ.ಎಚ್. ವಿಜಯಕುಮಾರ್ ಅವರು, ‘ನಿಯಮಗಳನ್ನು ರೂಪಿಸಿ ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ 2019ರ ಡಿಸೆಂಬರ್ 26ರಂದು ಕಳುಹಿಸಿಕೊಡಲಾಗಿದೆ. ಆದರೆ, ಈವರೆಗೆ ಅನುಮೋದನೆ ಸಿಕ್ಕಿಲ್ಲ’ ಎಂದು ತಿಳಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ರಾಜ್ಯ ಸರ್ಕಾರ 2019ರ ಡಿಸೆಂಬರ್ 26ರಂದು ಸಲ್ಲಿಸಿರುವ ಪ್ರಸ್ತಾವನೆ ಒಪ್ಪಿಗೆ ನೀಡಬೇಕು’ ಎಂದು ಕೇಂದ್ರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.