ADVERTISEMENT

ಬೆಂಗಳೂರು: ನಗರದಲ್ಲಿ ರಾತ್ರಿ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 22:26 IST
Last Updated 25 ಸೆಪ್ಟೆಂಬರ್ 2021, 22:26 IST

ಬೆಂಗಳೂರು: ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಹಲವೆಡೆ ಶನಿವಾರ ರಾತ್ರಿ ಜೋರು ಮಳೆ ಸುರಿಯಿತು.

ಕೆಲ ಪ್ರದೇಶಗಳಲ್ಲಿ ಮಧ್ಯಾಹ್ನ ಹಾಗೂ ಸಂಜೆ ಕೆಲವೆಡೆ ಜಿಟಿ ಜಿಟಿ ಮಳೆಯಾಯಿತು. ರಾತ್ರಿ 10 ಗಂಟೆ ಸುಮಾರಿಗೆ ಮಳೆ ಅಬ್ಬರ ಜೋರಾಗಿತ್ತು. ತಡರಾತ್ರಿಯೂ ಮಳೆ ಮುಂದುವರಿದಿತ್ತು.

ರಾಜಾಜಿನಗರ, ಮಲ್ಲೇಶ್ವರ, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ವಿಜಯನಗರ, ಯಶವಂತಪುರ, ಆರ್‌.ಟಿ.ನಗರ, ಸಂಜಯನಗರ, ಪೀಣ್ಯ, ಹೆಬ್ಬಾಳ, ಕೋರಮಂಗಲ, ಎಂ.ಜಿ.ರಸ್ತೆ, ಅಶೋಕನಗರ, ಎಚ್‌ಎಎಲ್‌, ಹೆಣ್ಣೂರು, ಸುತ್ತಮುತ್ತ ಸ್ಥಳಗಳಲ್ಲಿ ಮಳೆ ಅಬ್ಬರವಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.