ADVERTISEMENT

ನಾಳೆ ಬೆಳಿಗ್ಗೆ 6ರಿಂದಲೇ ಮೆಟ್ರೊ ರೈಲು ಸೇವೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2022, 11:17 IST
Last Updated 4 ಜೂನ್ 2022, 11:17 IST
ಮೆಟ್ರೊ ರೈಲು
ಮೆಟ್ರೊ ರೈಲು   

ಬೆಂಗಳೂರು: ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಭಾನುವಾರ(ಜೂನ್ 5) ನಡೆಯುತ್ತಿರುವುದರಿಂದ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೊ ರೈಲು ಸೇವೆ ಆರಂಭಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ(ಬಿಎಂಆರ್‌ಸಿಎಲ್‌) ನಿರ್ಧರಿಸಿದೆ.

ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಗೆ ಮೆಟ್ರೊ ರೈಲು ಸೇವೆ ಆರಂಭವಾಗುತ್ತಿತ್ತು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಗಮವಾಗಿ ತಲುಪಲು ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT