ADVERTISEMENT

ಮೆಜೆಸ್ಟಿಕ್‌ನಿಂದ –ಮೈಸೂರು ರಸ್ತೆ: ಮಾ. 26ರಿಂದಲೇ ಮೆಟ್ರೊ ಸಂಚಾರ ಆರಂಭ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 15:17 IST
Last Updated 24 ಮಾರ್ಚ್ 2021, 15:17 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ನಮ್ಮ ಮೆಟ್ರೊದ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್‌ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಇದೇ 26ರಿಂದಲೇ ರೈಲು ಸಂಚಾರ ಪುನರಾರಂಭವಾಗಲಿದೆ.

ಮೈಸೂರು ರಸ್ತೆಯಿಂದ–ಕೆಂಗೇರಿವರೆಗಿನ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್ ವ್ಯವಸ್ಥೆ ಮಾರ್ಪಾಡು ನಿಮಿತ್ತ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಇದೇ 21ರಿಂದ 28ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿತ್ತು.

ನಿಗದಿತ ಅವಧಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಳ್ಳುವುದರಿಂದ 26ರ ಬೆಳಿಗ್ಗೆ 7ರಿಂದಲೇ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ ಎಂದು ನಿಗಮ ಹೇಳಿದೆ.

ADVERTISEMENT

ಮಾ.25ರವರೆಗೆ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್‌ನಿಂದ ಬೈಯಪ್ಪನಹಳ್ಳಿ ನಿಲ್ದಾಣದ ನಡುವೆ ಮಾತ್ರ ಮೆಟ್ರೊ ರೈಲು ಸಂಚರಿಸಲಿದೆ.

ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದೂ ಬಿಎಂಆರ್‌ಸಿಎಲ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.