ADVERTISEMENT

ಮೇ 25ರಂದು ಬೆಳಿಗ್ಗೆ 6ಕ್ಕೆ ಮೆಟ್ರೊ ಸಂಚಾರ

​ಪ್ರಜಾವಾಣಿ ವಾರ್ತೆ
Published 23 ಮೇ 2025, 15:31 IST
Last Updated 23 ಮೇ 2025, 15:31 IST
   

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತಿರುವ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಮೇ 25ರಂದು ಬೆಳಿಗ್ಗೆ 6ಕ್ಕೆ ‘ನಮ್ಮ ಮೆಟ್ರೊ’ ರೈಲು ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.

ಪ್ರತಿ ಭಾನುವಾರ ಬೆಳಿಗ್ಗೆ 7ಕ್ಕೆ ಸಂಚಾರ ಆರಂಭವಾಗುತ್ತಿತ್ತು. ಪರೀಕ್ಷೆ ಇರುವುದರಿಂದ ಈ ಭಾನುವಾರ ಮೆಟ್ರೊ ನಾಲ್ಕು ಟರ್ಮಿನಲ್‌ಗಳಾದ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಬೆಳಿಗ್ಗೆ 6ಕ್ಕೆ ಮೊದಲ ರೈಲು ಹೊರಡಲಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT