ADVERTISEMENT

ಅ.1ರಂದು ಮೆಟ್ರೊ ಸಂಚಾರದಲ್ಲಿ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 21:34 IST
Last Updated 29 ಸೆಪ್ಟೆಂಬರ್ 2020, 21:34 IST
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ   

ಬೆಂಗಳೂರು: ವಿಸ್ತರಿಸಿದ ಮಾರ್ಗದಲ್ಲಿ ವಾಣಿಜ್ಯ ಸಂಚಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವುದರಿಂದ ಅ.1ರಂದು ಆರ್.ವಿ.ರಸ್ತೆ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

ಎರಡನೇ ಹಂತದ ವಿಸ್ತರಿಸಿದ ಮಾರ್ಗ ಯಲಚೇನಹಳ್ಳಿ-ಅಂಜನಾಪುರ ನಡುವೆ ಕಾರ್ಯಾಚರಣೆಗಾಗಿ ಪೂರ್ವಸಿದ್ಧತೆ ಕಾಮಗಾರಿಗಳು ಹಾಗೂ ವ್ಯವಸ್ಥೆಗಳ ಪರೀಕ್ಷೆ ನಡೆಸಲಾಗುತ್ತಿದೆ.

ಅಂದು ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ನಾಗಸಂದ್ರದಿಂದ ಆರ್.ವಿ. ರಸ್ತೆ ನಿಲ್ದಾಣದವರೆಗೆ ಮಾತ್ರ ಸೇವೆ ಇರಲಿದೆ. ಅ.2ರಂದು ಬೆಳಿಗ್ಗೆ 7ರಿಂದ ಎಂದಿನಂತೆ ರೈಲುಗಳು ಸಂಚರಿಸಲಿವೆ.

ADVERTISEMENT

ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವಿನ ಮೆಟ್ರೊ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.