ADVERTISEMENT

ಇನ್ನೂ ಎರಡು ವಾರ ಮೆಟ್ರೊ ಸಂಚಾರ ಇಲ್ಲ

​ಪ್ರಜಾವಾಣಿ ವಾರ್ತೆ
Published 3 ಮೇ 2020, 16:56 IST
Last Updated 3 ಮೇ 2020, 16:56 IST
ಮೆಟ್ರೊ ರೈಲು
ಮೆಟ್ರೊ ರೈಲು   

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೊ ರೈಲು ಸಂಚಾರ ಅವಧಿಯನ್ನು ಸೋಮವಾರದಿಂದ ಮುಂದಿನ ಎರಡು ವಾರದವರೆಗೆ ವಿಸ್ತರಿಸಲಾಗಿದೆ.

ಮೇ 3ರವರೆಗೆ ಲಾಕ್‌ಡೌನ್‌ ಘೋಷಿಸಿದ್ದರಿಂದ ಅಲ್ಲಿಯವರೆಗೆ ಸಂಚಾರ ಸ್ಥಗಿತಗೊಳಿಸಿರುವುದಾಗಿ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಈ ಮೊದಲು ತಿಳಿಸಿತ್ತು. ಈಗ ಲಾಕ್‌ಡೌನ್‌ ಮುಂದುವರಿಸಿರುವುದರಿಂದ ಮುಂದಿನ ಎರಡು ವಾರ ಅಥವಾ ಮುಂದಿನ ಆದೇಶ ಬರುವವರೆಗೆ ಸಂಚಾರ ನಿಷೇಧಿಸಿರುವುದಾಗಿ ಹೇಳಿದೆ.

ರೈಲುಗಳನ್ನು ಸುಸ್ಥಿತಿಯಲ್ಲಿ ಮತ್ತು ಪವರ್‌ ಮೋಡ್‌ನಲ್ಲಿ ಇರಿಸುವ ಉದ್ದೇಶದಿಂದ ಒಂದು ಪರೀಕ್ಷಾರ್ಥ ರೈಲು ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಬೆಳಿಗ್ಗೆ ಮತ್ತು ಸಂಜೆ ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ADVERTISEMENT

ಮೆಟ್ರೊ ನಿಲ್ದಾಣಗಳ ಬಳಿಯ ವಾಹನ ನಿಲುಗಡೆ ಸ್ಥಳಗಳು ಮತ್ತು ನಿಲ್ದಾಣದೊಳಗಿನ ವಾಣಿಜ್ಯ ಮಳಿಗೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗುತ್ತದೆ ಎಂದೂ ಅದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.