
ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದ ಎಂ.ಜಿ. ರಸ್ತೆ ನಿಲ್ದಾಣದಲ್ಲಿ ಬಿಎಂಆರ್‌ಸಿಎಲ್ ಸ್ಟೀಲ್ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಕಾರ್ಯ ಆರಂಭಿಸಿದೆ.
ಜನದಟ್ಟಣೆ ವಿಪರೀತ ಆಗಿರುವುದರಿಂದ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಿದೆ. ಅಲ್ಲದೇ ಗುಲಾಬಿ ಮಾರ್ಗವು ಇಲ್ಲಿಂದಲೇ ಹಾದು ಹೋಗುತ್ತಿರುವುದರಿಂದ ಮೆಟ್ರೊ ಸಂಚಾರ ಆರಂಭಗೊಂಡಾಗ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಳ ಆಗಲಿದೆ. ಅದಕ್ಕಾಗಿ ಈ ಕ್ರಮ ವಹಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
‘ಎಂ.ಜಿ. ರಸ್ತೆ ನಿಲ್ದಾಣದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಇದೇ ರೀತಿ ಎಲ್ಲೆಲ್ಲಿ ಅಗತ್ಯವಿದೆ ಎಂದು ನೋಡಿಕೊಂಡು ಮುಂದಿನ ದಿನಗಳಲ್ಲಿ ಸ್ಟೀಲ್ ಬ್ಯಾರಿಕೇಡ್ ಅಳವಡಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.