ADVERTISEMENT

ಹಾಲಿಗೆ ಏಕರೂಪದ ಖರೀದಿ ದರ ನಿಗದಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 18:27 IST
Last Updated 9 ಮಾರ್ಚ್ 2022, 18:27 IST
   

ಬೆಂಗಳೂರು: ‘ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿ ಮಾಡಬೇಕು’ ಎಂದುಕರ್ನಾಟಕ ಹಾಲು ಉತ್ಪಾದಕರ ವೇದಿಕೆಯ ಅಧ್ಯಕ್ಷ ಎಂ.ಆರ್.ನಾರಾಯಣಸ್ವಾಮಿ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿರುವ ವಿವಿಧ ಒಕ್ಕೂಟಗಳಲ್ಲಿ ಹಾಲಿನ ಖರೀದಿ ದರಗಳಲ್ಲಿ ವ್ಯತ್ಯಾಸವಿದೆ. ರಾಜ್ಯದಾದ್ಯಂತ ಏಕರೂಪದ ದರ ನಿಗದಿ ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ದರ ಕಡಿಮೆ ಮಾಡಬಾರದು’ ಎಂದರು.

‘2017ರಿಂದ ಹಾಲು ಉತ್ಪಾದಕರಿಗೆ ಆಗಿರುವ ನಷ್ಟ ಪಾವತಿಸಬೇಕು. ಹಾಲು ಉತ್ಪಾದಕರ ಮಕ್ಕಳಿಗೆಒಕ್ಕೂಟಗಳ ನೇಮಕಾತಿಗಳಲ್ಲಿ ಶೇ 50ರಷ್ಟು ಮೀಸಲಾತಿ ನೀಡಬೇಕು. ಸಹಕಾರ ಸಂಘಗಳ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು’ ಎಂದರು.

ADVERTISEMENT

‘ಹಾಲು ಸಹಕಾರ ಸಂಘಗಳ ಸಿಬ್ಬಂದಿಗೆ ಕನಿಷ್ಠ ವೇತನ, ಪಿಎಫ್‌, ಭತ್ಯೆ, ನಿವೃತ್ತಿ ವೇತನ ಸೌಲಭ್ಯಗಳನ್ನು ನೀಡಬೇಕು. ಉತ್ತರ ಕರ್ನಾಟಕದಲ್ಲಿ ಹಾಲು ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪಿಸಬೇಕು. ಈ ಎಲ್ಲ ಬೇಡಿಕೆಗಳನ್ನು15 ದಿನಗಳಲ್ಲಿ ಈಡೇರಿಸದಿದ್ದರೆ, ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌) ಮುಂದೆ ಧರಣಿ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.