ನಂದಿನಿ ಹಾಲು
ಬೆಂಗಳೂರು: ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನೀಡಿರುವ ನೋಟಿಸ್ ವಿರೋಧಿಸಿ ಜುಲೈ 23 ಮತ್ತು 24 ರಂದು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವುದಿಲ್ಲ ಎಂದು ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ಶೈಲೇಶ್ ಪೂಜಾರಿ ತಿಳಿಸಿದ್ದಾರೆ.
ನೋಟಿಸ್ ಹಿಂಪಡೆಯಬೇಕು ಎಂದು ಆಗ್ರಹಿಸಿ ಜುಲೈ 25ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೇಕರಿ, ಕಾಂಡಿಮೆಂಟ್ಸ್ ಹಾಗೂ ಇತರೆ ವ್ಯಾಪಾರಿಗಳು ತೋಳಿಗೆ ಕಪ್ಪು ಪಟ್ಟಿ ಧರಿಸಿ ವ್ಯಾಪಾರ ಮಾಡುತ್ತಾರೆ. ಆದರೆ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವುದಿಲ್ಲ ಮತ್ತು ಖರೀದಿಸುವುದೂ ಇಲ್ಲ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕೆ.ಆರ್.ಮಾರುಕಟ್ಟೆ ವ್ಯಾಪಾರಿಗಳಿಗೆ ಕರಪತ್ರಗಳನ್ನು ನೀಡಿ, ಮನವಿ ಮಾಡಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.