ADVERTISEMENT

ಮಧು ಬಂಗಾರಪ್ಪ ಹುಟ್ಟುಹಬ್ಬ: ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 16:14 IST
Last Updated 1 ಮಾರ್ಚ್ 2026, 16:14 IST
ಮಧು ಬಂಗಾರಪ್ಪ 
ಮಧು ಬಂಗಾರಪ್ಪ    

ಬೆಂಗಳೂರು: ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಓದಿ ಎಸ್ಎಸ್‌ಎಲ್‌ಸಿಯಲ್ಲಿ ಶೇ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ 60 ವಿದ್ಯಾರ್ಥಿಗಳು ಹಾಗೂ ಅವರ ತಂದೆ– ತಾಯಿಯನ್ನು ಸೋಮವಾರ ಇಲ್ಲಿ ಸನ್ಮಾನಿಸಲಾಗುತ್ತದೆ.

ಸೊರಬ ಕ್ಷೇತ್ರದ ಶಾಸಕರೂ ಆದ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಸೊರಬ ಪುರಸಭೆ ಮತ್ತು ಆನವಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 40 ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುತ್ತದೆ.

ನಗರದ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸೋಮವಾರ ಸಂಜೆ 5.50ಕ್ಕೆ ಕಾರ್ಯಕ್ರಮ ನಡೆಯಲಿದೆ. ಒಟ್ಟು ಮೂರು ತಂಡಗಳಲ್ಲಿ ವಿಮಾನ ಮತ್ತು ರೈಲಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ 160 ಮಂದಿ ಬರಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಪೋಷಕರು, ಪೌರಕಾರ್ಮಿಕರು ಸೇರಿದ್ದಾರೆ.

ADVERTISEMENT

ಸನ್ಮಾನದ ಬಳಿಕ ಇವರೆಲ್ಲ ಸೋಮವಾರ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮಂಗಳವಾರ ಬೆಳಿಗ್ಗೆಯಿಂದ ಸಂಜೆವರೆಗೆ ಪ್ರಮುಖ ಸ್ಥಳಗಳಾದ ವಿಧಾನ ಸೌಧ, ಸರ್ಕಾರಿ ಮತ್ಸ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಸ್ತುಸಂಗ್ರಹಾಲಯ, ನೆಹರೂ ತಾರಾಲಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.