ADVERTISEMENT

ಸಚಿವ ಎನ್.ಎಸ್. ಬೋಸರಾಜುಗೆ 79: ಇಂದು ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 23:05 IST
Last Updated 20 ಜೂನ್ 2025, 23:05 IST
ಎನ್.ಎಸ್ ಬೋಸರಾಜು,ಸಣ್ಣ ನೀರಾವರಿ ಸಚಿವ
ಎನ್.ಎಸ್ ಬೋಸರಾಜು,ಸಣ್ಣ ನೀರಾವರಿ ಸಚಿವ   

ಬೆಂಗಳೂರು:  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು 79ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವುದರಿಂದ ಅವರ ಅಭಿಮಾನಿ ಬಳಗ ರಾಯಚೂರಿನ ಕೃಷಿ ವಿವಿ ಆವರಣದಲ್ಲಿ ಜೂನ್‌ 21ರಂದು ಬೆಳಿಗ್ಗೆ 10.30ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸಲಿದ್ದಾರೆ. ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ‘ಚೈತನ್ಯ ಸಾಗರ’ ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಲಿದ್ದಾರೆ. ಸಾಹಿತಿ ಎಲ್. ಹನುಮಂತಯ್ಯ ಗ್ರಂಥ ಕುರಿತು ಮಾತನಾಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ  ಶರಣ ಪ್ರಕಾಶ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌. ತಂಗಡಗಿ, ತೆಲಂಗಾಣದ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ,  ಪಶು ಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವಾಕಿಟಿ ಶ್ರೀಹರಿ ಪಾಲ್ಗೊಳ್ಳಲಿದ್ದಾರೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ, ಶಾಸಕ ಹಂಪಯ್ಯ ನಾಯಕ್ ತಿಳಿಸಿದ್ದಾರೆ.

ರಾಯಚೂರು ಶಾಸಕ ಶಿವರಾಜ ಪಾಟೀಲ, ಸಂಸದರಾದ ಜಿ. ಕುಮಾರ್ ನಾಯಕ್, ರಾಧಾಕೃಷ್ಣ ದೊಡ್ಡಮನಿ, ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.