ADVERTISEMENT

‘ಕುಸುಮ್‌’ ಯೋಜನೆಯ ಅಡಿ ಪಂಪ್‌ಸೆಟ್‌ ನೀಡಲು ಕ್ರಮ’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 14:35 IST
Last Updated 4 ಅಕ್ಟೋಬರ್ 2021, 14:35 IST
   

ಬೆಂಗಳೂರು: ‘‍ಪ್ರಧಾನಮಂತ್ರಿ ಕುಸುಮ್‌’ ಯೋಜನೆಯ ಅಡಿಯಲ್ಲಿ ರಾಜ್ಯದ ಫಲಾನುಭವಿ ರೈತರಿಗೆ ಶೀಘ್ರವೇ ಸೋಲಾರ್‌ ಗ್ರಿಡ್‌ ಆಧಾರಿತ ಪಂಪ್‌ಸೆಟ್‌ಗಳನ್ನು ನೀಡಲು ಸರ್ಕಾರ ನೆರವಾಗಲಿದೆ’ ಎಂದು ಇಂಧನ ಸಚಿವ ವಿ.ಸುನಿಲ್‌ಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಉಪಕರಣಗಳ ತಯಾರಕರ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಶೀಘ್ರವೇ ಸೋಲಾರ್‌ ಅಳವಡಿಸಲಾಗುತ್ತದೆ. ಜೊತೆಗೆ 1000 ಇವಿ ಚಾರ್ಜಿಂಗ್‌ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ಪಾವಗಡದ ಮಾದರಿಯಲ್ಲಿ ರಾಜ್ಯದ ಇತರ ಭಾಗಗಳಲ್ಲಿಯೂ ಸೋಲಾರ್‌ ಪಾರ್ಕ್‌ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ಕರ್ನಾಟಕ ನವೀಕರಿಸಬಹುದಾದ ಇಂಧನ ಉಪಕರಣಗಳ ತಯಾರಕರ ಸಂಘದ ಅಧ್ಯಕ್ಷ ರಮೇಶ್‌ ಶಿವಣ್ಣ, ಕೆಆರ್‌ಇಡಿಎಲ್‌ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.