ADVERTISEMENT

ಹೊಲೆಯ, ಬೋವಿ ಜನಾಂಗಕ್ಕೆ ಸಚಿವ ಸ್ಥಾನ: ಒತ್ತಾಯ

ಸಾಮಾಜಿಕ ನ್ಯಾಯ ಪರಿಷತ್‌ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 19:24 IST
Last Updated 17 ಡಿಸೆಂಬರ್ 2019, 19:24 IST

ಬೆಂಗಳೂರು: ಹೊಲೆಯ, ಬೋವಿ, ನಾಯಕ ಜಾತಿಗಳ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಸಾಮಾಜಿಕ ನ್ಯಾಯ ಪರಿಷತ್‌ ಒತ್ತಾಯಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ ಅಧ್ಯಕ್ಷ ಅನಂತರಾಯಪ್ಪ,‘ದಲಿತರ ಬೆಂಬಲದಿಂದ ದೀರ್ಘಕಾಲದವರೆಗೆ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಪಕ್ಷ, ಈ ಮೂರೂ ಉಪಜಾತಿಗಳನ್ನು ಕಡೆಗಣಿಸಿತು. ಬಿ.ಬಸವಲಿಂಗಪ್ಪ, ಕೆ.ಎಚ್‌.ರಂಗನಾಥ್, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ ಹಾಗೂ ಕೆ.ಎಚ್.ಮುನಿಯಪ್ಪ ಅವರಂತಹ ಅನುಭವಿ ನಾಯಕರಿದ್ದರೂ ಮುಖ್ಯಮಂತ್ರಿ ಸ್ಥಾನ ನೀಡದೆ ಕಡೆಗಣಿಸಿತು’ ಎಂದು ದೂರಿದರು.

‘ದಲಿತ ಸಮುದಾಯದ ಗೋವಿಂದ ಎಂ.ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಬಿಜೆಪಿ ಸರ್ಕಾರ ಬದ್ಧತೆ ತೋರಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ಸಮುದಾಯಗಳ ಅಭಿವೃದ್ಧಿ ಗಾಗಿ ಹೊಲೆಯ, ಬೋವಿ ನಾಯಕರಿಗೆ ಸಚಿವ ಸ್ಥಾನ ಹಾಗೂ ನಾಯಕ ಜಾತಿಯ ಮುಖಂಡರೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.