ADVERTISEMENT

ಯುವತಿಯರ Instagram ಫೋಟೊ ತಿದ್ದುಪಡಿ ಮಾಡಿ ಶೇರಿಂಗ್: ಬಾಲಕರ ಸಹಿತ ಮೂವರ ಸೆರೆ

​ಪ್ರಜಾವಾಣಿ ವಾರ್ತೆ
Published 29 ಮೇ 2024, 16:28 IST
Last Updated 29 ಮೇ 2024, 16:28 IST
   

ಬೆಂಗಳೂರು: ಯುವತಿಯರ ಫೋಟೊಗಳನ್ನು ಅಶ್ಲೀಲವಾಗಿ ಮಾರ್ಫಿಂಗ್‌ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಬಾಲಕರೂ ಸೇರಿ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸೆನ್‌ ಠಾಣೆ (ಸೈಬರ್ ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಗಲೂರಿನ ನಿವಾಸಿ, ಕಾಲೇಜು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ಬಾಲಕರನ್ನು ಬಾಲ ನ್ಯಾಯಮಂಡಳಿಗೆ ಹಾಜರು ಪಡಿಸಲಾಗಿದ್ದು, ಮೂವರ ಮೊಬೈಲ್‌ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಆರೋಪಿಗಳು, ಬಾಲಕಿಯ ಇನ್‌ಸ್ಟಾಗ್ರಾಂ ಖಾತೆಯಿಂದ ಫೋಟೊ ತೆಗೆದು ಅದನ್ನು ಅಶ್ಲೀಲವಾಗಿ ಮಾರ್ಫಿಂಗ್‌ ಮಾಡುತ್ತಿದ್ದರು. ಅಶ್ಲೀಲ ಫೋಟೊ ಹರಿಯಬಿಡಲು ನಕಲಿ ಖಾತೆಗಳನ್ನು ಸೃಷ್ಟಿಸಿಕೊಂಡಿದ್ದರು. ಇದು ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಒಬ್ಬ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಉಳಿದಿಬ್ಬರು ಶಾಲೆಗಳಲ್ಲಿ ಕಲಿಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.