ADVERTISEMENT

ಮಿಂಟೊ ಕಣ್ಣಿನ ಆಸ್ಪತ್ರೆ; 18 ಮಂದಿ ಮನೆಗೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 19:27 IST
Last Updated 24 ಜುಲೈ 2019, 19:27 IST

ಬೆಂಗಳೂರು:ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ 24 ಮಂದಿಯಲ್ಲಿ ಸದ್ಯ ಆರು ಮಂದಿ ಮಾತ್ರ ನಗರದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಉಳಿದ 18 ಮಂದಿ ಮನೆಗೆ ತೆರಳಿದ್ದಾರೆ.

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಪಟ್ಟವರಲ್ಲಿ ಮೂವರಿಗೆ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದ ಒಬ್ಬ ವ್ಯಕ್ತಿಗೆ ಕಿಡ್ನಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಇಬ್ಬರಿಗೆ ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

‘ಮನೆಗೆ ತೆರಳಿರುವ 18 ಮಂದಿಯ ದೃಷ್ಟಿಯಲ್ಲಿ ಸ್ವಲ್ಪ ಸುಧಾರಣೆ ಕಂಡು ಬಂದಿದೆ. ಪೂರ್ಣಪ್ರಮಾಣದಲ್ಲಿ ಸರಿಹೋಗಲು ಸ್ವಲ್ಪ ಸಮಯ ಬೇಕಾಗುತ್ತದೆ. ವಾರಕ್ಕೊಮ್ಮೆ ತಪಾಸಣೆಗೆ ಬರುವಂತೆ ಸೂಚಿಸಲಾಗಿದೆ’ ಎಂದು ಮಿಂಟೊ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ತಿಳಿಸಿದರು.

ADVERTISEMENT

‘ಔಷಧ ಮಾದರಿಯನ್ನು ಸಂಗ್ರಹಿಸಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಹೆಚ್ಚುವರಿ ಔಷಧ ನಿಯಂತ್ರಕ ಅಮರೇಶ್‌ ತುಂಬಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.