ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಮಿಂಟೊ ಕಣ್ಣಿನ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಪಟ್ಟವರಿಗೆ ಸಾಂತ್ವನಹೇಳಿದರು.
ಇದೇ 9ರಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಪಟ್ಟ 23 ಮಂದಿಯಲ್ಲಿ ಇಬ್ಬರಿಗೆ ಮಾತ್ರ ದೃಷ್ಟಿ ಬಂದಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರಿಸ ಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ವಿಚಾರಿಸಿದ ರಾಕೇಶ್ ಸಿಂಗ್, ಚಿಕಿತ್ಸಾ ವಿಧಾನದ ಬಗ್ಗೆ ಆಸ್ಪತ್ರೆ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಅವರಿಂದಮಾಹಿತಿ ಪಡೆದುಕೊಂಡರು.
‘ಸದ್ಯ ನೀಡುತ್ತಿರುವ ಚಿಕಿತ್ಸೆಯನ್ನೇ ಮುಂದುವರಿಸುವುದು ಸೂಕ್ತ. ಸರ್ಕಾರದಿಂದ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.