ADVERTISEMENT

ಮಿಂಟೊ: ‘ಔಷಧವೇ ಕಾರಣ, ವೈದ್ಯರಲ್ಲ’

ಮಿಂಟೊ ಆಸ್ಪತ್ರೆ– ಕಣ್ಣಿನ ಶಸ್ತ್ರಚಿಕಿತ್ಸೆ ಬಳಿಕ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 19:27 IST
Last Updated 18 ಜುಲೈ 2019, 19:27 IST
   

ಬೆಂಗಳೂರು: ನಗರದ ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈ 9ರಂದು 24 ಮಂದಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಬಳಿಕ ಉಂಟಾದ ತೊಂದರೆಗಳಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಅಲ್ಲ, ಔಷಧವೇ ಕಾರಣ ಎಂದುಕರ್ನಾಟಕ ರಾಜ್ಯ ಸರ್ಕಾರಿ ನೇತ್ರಾಧಿಕಾರಿಗಳ ಸಂಘದ ಅಧ್ಯಕ್ಷ ಎಂ.ವೆಂಕಟೇಶ್‌ ಹೇಳಿದ್ದಾರೆ.

ಶಸ್ತ್ರಚಿಕಿತ್ಸೆ ನಡೆಸುವ ರೋಗಿಗಳಿಗೆ ಉಪಯೋಗಿಸಿದ ಔಷಧಿಯಲ್ಲಿ (Occugel 2 %) ಸೋಂಕು ಇದ್ದುದರಿಂದಕಣ್ಣುಗಳ ದೃಷ್ಟಿಗೆ ತೊಂದರೆಯಾಗಿದೆ.ಕೂಡಲೇ ವೈದ್ಯರು ಈ ಔಷಧಿಗಳನ್ನು ಬೆಂಗಳೂರಿನ ವಿವಿಧ ಪ್ರಯೋಗಾಲಯಗಳಿಗೆ ಕಳುಹಿಸಿದ್ದಾರೆ ಹಾಗೂ ರೋಗಿಗಳು ಗುಣಮುಖವಾಗಲು ಅಗತ್ಯ ಕ್ರಮಗಳನ್ನು ಜರುಗಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಿಕ್ಟೋರಿಯಾ ಆಸ್ಪತ್ರೆಯ ಮೈಕ್ರೋಬಯಾಲಜಿ ವಿಭಾಗದಿಂದ ಹಾಗೂ ಪಿಎಂಎಸ್ಎಸ್ ಕಣ್ಣಿನ ಆಸ್ಪತ್ರೆಯ ಪ್ರಯೋಗಾಲಯಗಳಿಂದ ಈ ಔಷಧಿಯಲ್ಲಿ pseudomonas ಎಂಬ ವೈರಾಣು ಪತ್ತೆಯಾಗಿದೆ.ಈಗಾಗಲೇ ಈ ಔಷಧ ವಿತರಿಕರ ವಿರುದ್ಧ ಕ್ರಮ ಜರುಗಿಸಲು ಹಾಗೂ ಈ ಘಟನೆ ಬಗ್ಗೆ ಕೂಲಂಕಷ ತನಿಖೆ ನಡೆಸಲು ಆಸ್ಪತ್ರೆಯ ಅಧಿಕಾರಿಗಳು ಸರ್ಕಾರ ಮತ್ತು ಮೇಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿರುತ್ತಾರೆ. ದೃಷ್ಟಿ ತೊಂದರೆಗಳಿಗೆ ಒಳಗಾದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆಯನ್ನು ವೈದ್ಯರುಗಳು ಅತೀ ಕಾಳಜಿಯಿಂದ ನೀಡುತ್ತಿದ್ದು, ಬಹುತೇಕ ರೋಗಿಗಳು ಗುಣಮುಖರಾಗಿದ್ದಾರೆ. ಸಾರ್ವಜನಿಕರು ಆಸ್ಪತ್ರೆಯ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗಬಾರದು’ ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.