ಬೆಂಗಳೂರು: ‘ನನ್ನ ಹೆಸರು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬಂಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬಂಧ ಇಲ್ಲ’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಕಲಿ ಪತ್ರದ ಸಹಿತ ಟ್ವೀಟ್ ಮಾಡಿರುವ ಅವರು, ‘ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಲು ಈ ಖೊಟ್ಟಿ ಪತ್ರ ಹರಿಯಬಿಡಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಿದ್ದು, ಈ ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸುತ್ತಾರೆಂದು ನಂಬಿದ್ದೇನೆ’ ಎಂದಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಬರೆದಿರು
ವುದು ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರ ಲೆಟರ್ ಹೆಡ್ನಲ್ಲಿರುವ ಈ ಪತ್ರದಲ್ಲಿ, ಡಿ.ಕೆ. ಶಿವಕುಮಾರ್ ವಿರುದ್ಧ ಸಿದ್ದರಾಮಯ್ಯ ದೂರು ನೀಡಿದ್ದಾರೆ ಎಂದು ಬರೆಯಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.