ADVERTISEMENT

ಬೆಂಗಳೂರು | ಅಸಭ್ಯ ವರ್ತನೆ: ಯುವಕ ಪೊಲೀಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2024, 16:27 IST
Last Updated 28 ಜುಲೈ 2024, 16:27 IST
   

ಬೆಂಗಳೂರು: ರ‍್ಯಾಪಿಡೊ ಬೈಕ್ ಟ್ಯಾಕ್ಸಿ ಚಲಾಯಿಸುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನನ್ನು ಭಾನುವಾರ ವಶಕ್ಕೆ ಪಡೆಯಲಾಗಿದೆ.  

35 ವರ್ಷದ ಮಹಿಳೆ ಈ ಸಂಬಂಧ ಬಾಗಲಗುಂಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಟ್ಯಾಕ್ಸಿ ಬುಕ್ ಮಾಡಿದ್ದ ರಾಜಸ್ಥಾನದ ಜೈಪುರ ಮೂಲದ ಮಹೇಶ್ (27) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ಜಾಲಹಳ್ಳಿಯ ಎಚ್​ಎಂಟಿಯಿಂದ ದಾಸರಹಳ್ಳಿಗೆ ಬರುವ ಮಾರ್ಗ ಮಧ್ಯದಲ್ಲಿ ಯುವಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಘಟನೆ ಬಳಿಕ ಬೈಕ್ ನಿಲ್ಲಿಸಿ ಹೊಯ್ಸಳ ಪೊಲೀಸರಿಗೆ ಮಹಿಳೆ ಕರೆ ಮಾಡಿದ್ದು, ಸ್ಥಳಕ್ಕೆ ಬಂದು ವಶಕ್ಕೆ ಪಡೆದುಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.