ADVERTISEMENT

ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 13:22 IST
Last Updated 19 ಜುಲೈ 2021, 13:22 IST
ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ
ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ   

ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸದಸ್ಯರನ್ನಾಗಿ ಸುರಭಿ ರಘು ಮತ್ತು ಬಿ.ಸುರೇಶ್‌ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನಟಿ ಶೃತಿಯವರನ್ನು ನೇಮಕ ಮಾಡಲಾಗಿದೆ. ಶೃತಿ ಈ ಹಿಂದೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದರು. ಭಾನುವಾರ ಅವರ ನೇಮಕ ರದ್ದು ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಕಾ.ಪು.ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.