ADVERTISEMENT

ಉದ್ಯೋಗ ಕಲ್ಪಿಸಲು ಕೇಂದ್ರ ವಿಫಲ -ಶಾಸಕ ರಾಮಲಿಂಗಾ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2023, 21:45 IST
Last Updated 19 ಫೆಬ್ರುವರಿ 2023, 21:45 IST
ಮಲ್ಲಸಂದ್ರದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ಶಿವರಾಮ್, ಶಾಸಕ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಮುಖಂಡರಾದ ಕೆ.ಸಿ. ಅಶೋಕ್, ಕೆ. ನಾಗಭೂಷಣ್, ಉದಯ್ ಕುಮಾರ್ ಇದ್ದರು.
ಮಲ್ಲಸಂದ್ರದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ಶಿವರಾಮ್, ಶಾಸಕ ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಮುಖಂಡರಾದ ಕೆ.ಸಿ. ಅಶೋಕ್, ಕೆ. ನಾಗಭೂಷಣ್, ಉದಯ್ ಕುಮಾರ್ ಇದ್ದರು.   

ಪೀಣ್ಯದಾಸರಹಳ್ಳಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾವಂತರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದ್ದು, ಯುವಜನರಿಗೆ ವಂಚಿಸಿದೆ’ ಎಂದು ಶಾಸಕ ರಾಮಲಿಂಗಾ ರೆಡ್ಡಿ ಅರೋಪಿಸಿದರು.

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ಶಿವರಾಮ್‌ ಅವರ ನೇತೃತ್ವದಲ್ಲಿ ಮಲ್ಲಸಂದ್ರದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರತಿಭಾವಂತ ಯುವಜನರಿಗೆ ನಿರಾಸೆಯಾಗಿದೆ. ಮೋದಿ ನೇತೃತ್ವದ ಸರ್ಕಾರ ವಿದ್ಯಾವಂತರನ್ನು ಬೀದಿಗೆ ತಂದಿದೆ’ ಎಂದು ದೂರಿದರು.

ADVERTISEMENT

‘ಉದ್ಯೋಗ ಮೇಳದಲ್ಲಿ 70ಕ್ಕೂ ಹೆಚ್ಚು ವಿವಿಧ ಕಂಪನಿಗಳು ಭಾಗಿ ಯಾಗಿ, ಸಂದರ್ಶನ ನಡೆಸಿದವು. ಅನೇಕ ವಿದ್ಯಾವಂತರು ಉದ್ಯೋಗ ಪಡೆದುಕೊಂಡರು’ ಎಂದು ಆಯೋಜಕಿ ಗೀತಾ ತಿಳಿಸಿದರು.

ಮುಖಂಡರಾದ ನಾಗಲಕ್ಷ್ಮಿ ಚೌಧರಿ, ಮಂಜುನಾಥ್, ಮಂಜುನಾಥ್ ನಾಗಯ್ಯ, ಜಗದೀಶ್, ಸಿದ್ದರಾಜು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.