ADVERTISEMENT

‘ಒಳ ಶತ್ರುಗಳು ಅಪಾಯಕಾರಿ’; ಶಾಸಕ ಎಸ್.ಆರ್.ವಿಶ್ವನಾಥ್

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 1:24 IST
Last Updated 16 ಆಗಸ್ಟ್ 2021, 1:24 IST
ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಶಾಸಕ ಎಸ್.ಆರ್.ವಿಶ್ವನಾಥ್, ವಿಶೇಷ ತಹಶೀಲ್ದಾರ್ ಬಿ.ಆರ್.ಮಂಜುನಾಥ್ ಹಾಗೂ ಇತರರು ಇದ್ದಾರೆ. 
ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಶಾಸಕ ಎಸ್.ಆರ್.ವಿಶ್ವನಾಥ್, ವಿಶೇಷ ತಹಶೀಲ್ದಾರ್ ಬಿ.ಆರ್.ಮಂಜುನಾಥ್ ಹಾಗೂ ಇತರರು ಇದ್ದಾರೆ.    

ಯಲಹಂಕ:‘ದೇಶದ ಹೊರಗಿನ ಭಯೋತ್ಪಾದಕರು ನೇರ ಶತ್ರುಗಳಾದರೆ, ನಮ್ಮ ನಡುವೆಯೇ ಇದ್ದುಕೊಂಡು ದೇಶಕ್ಕೆ ದ್ರೋಹ ಬಗೆಯುವವರು ಹೆಚ್ಚು ಅಪಾಯಕಾರಿ. ಇಂತಹವರನ್ನು ನಾವು ಎಂದಿಗೂ ಸಹಿಸಬಾರದು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಯಲಹಂಕ ತಾಲ್ಲೂಕು ಆಡಳಿತದ ವತಿಯಿಂದ ಹೊಯ್ಸಳ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅನೇಕ ವೀರರ ತ್ಯಾಗ–ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಅವರನ್ನು ನಾವು ಸದಾ ಸ್ಮರಿಸಬೇಕು’ ಎಂದರು.

ADVERTISEMENT

ಪೊಲೀಸ್, ಎನ್‌ಸಿಸಿ, ಭಾರತ ಸೇವಾದಳ, ವಿದ್ಯಾರ್ಥಿಗಳು ಹಾಗೂ ವಾದ್ಯಗೋಷ್ಠಿ ತಂಡಗಳಿಂದ ಪಥಸಂಚಲನ ನಡೆಯಿತು.

ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ಅಶೋಕ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಎಂ.ವೆಂಕಟೇಶ್, ಮುಖಂಡರಾದ ಎಂ.ಸತೀಶ್, ಎಂ.ಮುನಿರಾಜು ಹಾಗೂ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.