
ಪ್ರಜಾವಾಣಿ ವಾರ್ತೆ
ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ, ಬಿಜೆಪಿ–ಜೆಡಿಎಸ್ ಜಂಟಿ ಪ್ರಚಾರಕ್ಕೆ ಶಾಸಕ ಎಸ್.ಆರ್. ವಿಶ್ವನಾಥ್, ಅದ್ದಿಗಾನಹಳ್ಳಿಯ ಪಟಾಲಮ್ಮ ದೇವಸ್ಥಾನದಲ್ಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
‘ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಲು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳನ್ನು ಪಡೆಯಲು ಸಂಕಲ್ಪಮಾಡಿ ಪ್ರಚಾರಕಾರ್ಯ ಆರಂಭಿಸಲಾಗಿದೆ’ ಎಂದು ವಿಶ್ವನಾಥ್ ತಿಳಿಸಿದರು.
ರಾಜಾನುಕುಂಟೆ, ಅರಕೆರೆ, ಸೊಣ್ಣೇನಹಳ್ಳಿ ಸೇರಿ ಹತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.